ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ನಿನ್ನೆ ರಾತ್ರಿ ಕಾಡಾನೆ ದಾಳಿ ನಡೆಸಿದೆ.
ಮುನಿಯಪ್ಪ, ನಾಗರಾಜು, ಜಡೇಸ್ವಾಮಿ ಆನೆ ದಾಳಿಗೆ ಒಳಗಾದವರು. ರಾತ್ರಿ ಸಮಯದಲ್ಲಿ ಗಸ್ತಿಗೆ ಹೋಗಿದ್ದಾಗ ಗುಂಡಿಮಾಳ ಗ್ರಾಮದ ಮುಖ್ಯ ರಸ್ತೆಯಲ್ಲಿ ಆನೆ ಗ್ರಾಮಕ್ಕೆ ನುಗ್ಗುತ್ತಿರುವುದನ್ನು ಕಂಡು ತಡೆಯಲು ಮುಂದಾಗಿದ್ದಾರೆ. ಈ ಸಂದರ್ಭ ಆನೆ ಮೂವರ ಮೇಲೆ ದಾಳಿ ಮಾಡಿದೆ.