ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಜುಲೈ 7 ರಂದು ಸೋಮವಾರ ಪಟ್ಟಣದ ಪಿ.ಎಲ್.ಡಿ.ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿರುವ ಮೈಸೂರು ಮತ್ತು ಕೊಡಗು ಸಂಸದ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ ಅವರ ಪೌರ ಸನ್ಮಾನ ಮತ್ತು ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ಮೂರನೇ ರ್ಯಾಂಕ್ ಗಳಿಸಿರುವ ಡಾ.ಸಾ.ರಾ.ಧನುಷ್ ಅವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಸುತ್ತೂರು ಮಠಧೀಶರಾದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ವಹಿಸುವರು,
ಜಿ.ಪಂ.ಮಾಜಿ ಉಪಾಧ್ಯಕ್ಷ ಅಡಗೂರು ಚನ್ನಬಸಪ್ಪ ನೇತೃತ್ವದಲ್ಲಿ ಕೆ..ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ನಾಗರೀಕ ವೇದಿಕೆಯ ಕಾರ್ಯಕ್ರಮವಾಗಿದ್ದು ಪಟ್ಟಣದ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಂಶದ ಕುಡಿ ಯಧುವೀರ ಕೃಷ್ಣದತ್ತ ಒಡೆಯರ್ ಅವರಿಗೆ ಪೌರ ಸನ್ಮಾನ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಬಡವರಿಗೆ, ಮಧ್ಯಮ ವರ್ಗದ ಕುಟುಂಬಕ್ಕೆ ಉಚಿತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ಡಾ.ಸಾ.ರಾ.ಧನುಷ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದು ಇದರೊಂದಿಗೆ ರಾಜ್ಯಕ್ಕೆ ಸ್ನಾತಕೋತ್ತರ ಪದವಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪರೀಕ್ಷೆಯಲ್ಲಿ ಮೂರನೇ ರ್ಯಾಂಕ್ ಪಡೆದಿದ್ದರಿಂದ ಅಭಿನಂದನಾ ಕಾರ್ಯಕ್ರಮ ಅಯೋಜನೆ ಮಾಡಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಪಂ.ಮಾಜಿ ಅಧ್ಯಕ್ಷ ಅಡಗೂರು ಚನ್ನಬಸಪ್ಪ, ಘನ ಉಪಸ್ಥಿತಿ ಮಾಜಿ ಸಚಿವ ಸಾ.ರಾ.ಮಹೇಶ್, ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮಾಜಿ ಸಚಿವ ಸಾ.ರಾ.ಮಹೇಶ್ ಅಭಿಮಾನಿಗಳು, ಜಾದಳ ಕಾರ್ಯಕರ್ತರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿಮಾನಿಗಳು ಸೇರಿದಂತೆ ವಿವಿದ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಸಾ.ರಾ.ಸ್ನೇಹ ಬಳಗದ ಕಗ್ಗರೆ ಕುಚೇಲ ಮತ್ತು ಲಾಳಂದೇವನಹಳ್ಳಿ ಗ್ರಾ.ಪಂ. ಸದಸ್ಯ ಬಾಲಾಜಿ ಮನವಿ ಮಾಡಿದ್ದಾರೆ.