ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ತಾಲೂಕು ಪಿಎಲ್‌ಡಿ ಬ್ಯಾಂಕ್ ನಾಮನಿರ್ದೇಶಿತ ನಿರ್ದೇಶಕಿಯನ್ನಾಗಿ ನೇಮಕ ಮಾಡಿಸಿರುವ ಶಾಸಕ ಡಿ.ರವಿಶಂಕರ್ ಮತ್ತು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನಾನು ಸದಾ ಅಭಾರಿಯಾಗಿರುತ್ತೇನೆ ಎಂದು ಬ್ಯಾಂಕಿನ ನಿರ್ದೇಶಕಿ ಕಲಾವತಿ ಹೇಳಿದರು.
ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಸ್ಪರ್ದಿಸಿದ್ದ ನಾನು ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು ನನ್ನ ಸೇವೆಯನ್ನು
ಗುರುತಿಸಿ ಬ್ಯಾಂಕಿನಲ್ಲಿ ರೈತರ ಸೇವೆ ಮಾಡಲು ಅವಕಾಶ ನೀಡಿರುವ ವರಿಷ್ಠರ ಆಶೀರ್ವಾದವನ್ನು ಉಳಿಸುವ ಕೆಲಸ ಮಾಡುತ್ತೇನೆ ಎಂದರು.
ಸತತ ಎರಡನೇ ಬಾರಿಗೆ ಕಾಂಗ್ರೆಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ನಮ್ಮ ನೆಚ್ಚಿನ ಶಾಸಕರಾದ ಡಿ.ರವಿಶಂಕರ್ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದ್ದು ಮುಂದಿನ
ದಿನಗಳಲ್ಲಿ ಎಲ್ಲರೂ ಸೇರಿ ಜನಪರ ಕೆಲಸ ಮಾಡುತ್ತೇವೆ ಎಂದರು.
ಇದರೊಂದಿಗೆ ಮುಂಬರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸಲಿದ್ದು ನಮ್ಮ ಪಕ್ಷದ
ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಜನಪರ ಮತ್ತು ಅಭಿವೃದ್ದಿ ಪರವಾದ ಕೆಲಸಗಳನ್ನು ಜನರಿಗೆ ತಿಳಿಸಿ
ಮತಯಾಚನೆ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಾಮನಿರ್ದೇಶಿತ ನಿರ್ದೇಶಕಿಯಾಗಿ ನೇಮಕಗೊಂಡಿರುವ ಕಲಾವತಿ ಅವರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಸಿ.ಪ್ರಸಾದ್, ಉಪಾಧ್ಯಕ್ಷ
ಹೆಚ್.ಕೆ.ಪ್ರದೀಪ್, ನಿರ್ದೇಶಕರಾದ ಬಿ.ಎಸ್.ಚಂದ್ರಹಾಸ, ಕೆ.ಟಿ.ಚಂದ್ರೇಗೌಡ, ಡಿ.ಆರ್.ರಾಹುಲ್, ಕುಳ್ಳಬೋರೇಗೌಡ, ಇಂದ್ರೇಶ್, ಗ್ರಾ.ಪಂ. ಮಾಜಿ ಸದಸ್ಯ ಹೆಚ್.ಜೆ.ರಮೇಶ್ ಇದ್ದರು.