ಕೆ.ಆರ್ ನಗರ : ಕೃಷ್ಣರಾಜನಗರ ತಾಲೂಕಿನ ಭೇರ್ಯ ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ಗಂಡು ಚಿರತೆ ಎರಡು ದಿನಗಳಿಂದ ಓಡಾಡುತ್ತಿದ್ದು, ಗ್ರಾಮದ ಸಾರ್ವಜನಿಕರ ಕಣ್ಣಿಗೆ ಕಾಣಿಸಿಕೊಂಡಿದ್ದು ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿ ಶನಿವಾರ ಬೆಳಿಗ್ಗೆ ಅರಣ್ಯ ಇಲಾಖೆ ವತಿಯಿಂದ ಬೋನನ್ನು ಇರಿಸಲಾಗಿತ್ತು. ಇಂದು ಬೆಳಿಗ್ಗೆ ಬೋನಿಗೆ ಬಿದ್ದ ಆರು ವರ್ಷದ ಗಂಡು ಚಿರತೆಯನ್ನು ಅರಣ್ಯ ಇಲಾಖೆಗಳು ಇಂದು ನಾಗರಹೊಳೆಯ ಅಭಯಾರಣ್ಯಕ್ಕೆ ರವಾನೆ ಮಾಡಿದ್ದಾರೆ. ಕಳೆದ ಸುಮಾರು ದಿನಗಳಿಂದ ಕೆ.ಆರ್ ನಗರದ ಅಕ್ಕ ಪಕ್ಕದ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ.
