Monday, April 21, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಆಯ್ಕೆ

ಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಆಯ್ಕೆ

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಂಟು ಮಂದಿ ಆಯ್ಕೆಯಾಗಿದ್ದು, ಎರಡನೇ ಬಾರಿ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದ್ದಾರೆ.

೧೪ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದರು ಇದರ ಜತೆಗೆ ಸೋಮವಾರ ನಡೆದ ಮತ
ಎಣಿಕೆಯಲ್ಲಿ ಐವರು ಚುನಾಯಿತರಾಗಿದ್ದು ಅಧಿಕಾರ ನಡೆಸಲು ಅಗತ್ಯವಿರುವ ಸಂಖ್ಯೆ ತಲುಪಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಆ ಮೂಲಕ ತನ್ನ ಗೆಲುವಿನ ನಾಗಾಲೋಟ ಮುಂದುವರಿಸಿದ್ದು ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಿದೆ.

ಇವರೊಂದಿಗೆ ನಾಲ್ವರು ಜೆಡಿಎಸ್ ಪಕ್ಷದ ಬೆಂಬಲಿತರು ಆಯ್ಕೆಯಾಗಿದ್ದು ಜತೆಗೆ ಇಬ್ಬರು ಪಕ್ಷೇತರರು ಚುನಾಯಿತರಾಗಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ದಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿ.ಪಂ. ಮಾಜಿ ಸದಸ್ಯೆ ಪುಷ್ಪಲತಾರಮೇಶ್(೨೮೩) ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ದಿಯಾಗಿದ್ದ ಪುರಸಭೆ ಸದಸ್ಯ ಉಮೇಶ್ ಅವರನ್ನು ೧೨೫ ಮತಗಳ ಅಂತರದಿಂದ ಪರಾಭವಗೊಳಿಸಿ ರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಸಾಲಗಾರರ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾಗಿ ಕಣದಲ್ಲಿದ್ದ ಕುಳ್ಳಬೋರೇಗೌಡ(೫೫), ಚಂದ್ರೇಗೌಡ(೫೧), ಚಂದ್ರಹಾಸ(೬೫), ಹೆಚ್.ಕೆ.ಪ್ರದೀಪ್‌ಕುಮಾರ್(೫೬) ಆಯ್ಕೆಯಾಗಿದ್ದು ಇವರೊಂದಿಗೆ ಜೆಡಿಎಸ್ ಬೆಂಬಲಿತರಾಗಿ ಸ್ಪರ್ದೆ ಮಾಡಿದ್ದ
ಎಸ್.ಎಂ.ಸೋಮಣ್ಣ (೨೫), ದೊಡ್ಡಯ್ಯ (೫೮), ರಮೇಶ್ ನಾಯಕ(೭೬), ಗಾಯತ್ರಮ್ಮ(೫೪) ಚುನಾಯಿತರಾಗಿದ್ದಾರೆ.

ಪಕ್ಷೇತರರಾಗಿ ಅಖಾಡದಲ್ಲಿದ್ದ ಎಂ.ಎಸ್.ಹರಿಚಿದಂಬರ(೬೨), ಮಹೇಶ್(೬೧) ನಿರ್ದೇಶಕರಾಗಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಬೆಂಬಲಿತರಾಗಿ ಮಂಗಳಪ್ರಸಾದ್, ಇಂದ್ರೇಶ್, ಡಿ.ಆರ್.ರಾಹುಲ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಶಾಸಕ ಡಿ.ರವಿಶಂಕರ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಮತ್ತು ಕಾಂಗ್ರೆಸ್ ಪಕ್ಷದ ಪರವಾಗಿ ಜಯಕಾರದ ಘೋಷಣೆಗಳನ್ನು ಮೊಳಗಿಸಿ ಸಂಭ್ರಮಾಚರಣೆ ನಡೆಸಿದರು.

ಪುರಸಭೆ ಅಧ್ಯಕ್ಷ ಶಿವುನಾಯಕ್, ಸದಸ್ಯರಾದ ನಟರಾಜು, ಶಂಕರ್‌ಸ್ವಾಮಿ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ಸಿ.ಪಿ.ರಮೇಶ್‌ಕುಮಾರ್, ತಾ.ಪಂ. ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ಎಪಿಎಂಎಸಿ ಮಾಜಿ ಅಧ್ಯಕ್ಷ ಕೆಡಗನಟರಾಜು, ಪಿಎಲ್‌ಡಿ ಬ್ಯಾಂಕ್ ಮಾಜಿ
ಅಧ್ಯಕ್ಷ ಎನ್.ಸಿ.ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್‌ಜಾಬೀರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಅರ್ಜುನಹಳ್ಳಿ ಗ್ರಾ.ಪಂ.
ಮಾಜಿ ಅಧ್ಯಕ್ಷ ದಿಲೀಪ್‌ಕುಮಾರ್, ಕಾಂಗ್ರೆಸ್ ಮುಖಂಡರಾದ ದಿಡ್ಡಹಳ್ಳಿಬಸವರಾಜು, ಆದರ್ಶ, ಕೆ.ವಿನಯ್, ಪುಟ್ಟರಾಜು, ಬಿ.ಟಿ.ಮೋಹನ್, ಒಂಟಿಮನೆಉಮಾಶಂಕರ್, ಸಂಜಯ್‌ತಿಲಕ್, ಸಾಗರ್ ಮತ್ತಿತರರು ನೂತನ ನಿರ್ದೇಶಕರನ್ನು ಅಭಿನಂದಿಸಿದರು.

ಕೈ ಬೆಂಬಲಿತರು ಅಧಿಕಾರ ಹಿಡಿಯಲು ಸಹಕಾರ ನೀಡಿದ ರೈತ ಸದಸ್ಯರಿಗೆ ಧನ್ಯವಾದ: ದೊಡ್ಡಸ್ವಾಮೇಗೌಡ : ಚುನಾವಣೆಯಲ್ಲಿ ಅಧಿ
ಸತತ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಬೆಂಬಲ ನೀಡಿದ ಬ್ಯಾಂಕ್ ರೈತ ಸದಸ್ಯ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು.
ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಿಎಲ್‌ಡಿ ಬ್ಯಾಂಕ್‌ಗೆ ಪಕ್ಷದ ಬೆಂಬಲಿತರಾಗಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದ ಅವರು ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ
ಪಕ್ಷ ಗೆಲುವಿನ ಅಭಿಯಾನ ಮುಂದುವರೆಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಗೆಲುವು ನಮಗೆ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಿಗೆ ಗೆಲುವಿನ ಸೋಪಾನವಾಗಲಿದ್ದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಂದಿನಿಂದಲೇ ಸಂಘಟಿತರಾಗಿ ಕೆಲಸ ಮಾಡಿ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸ್ಥಾನಗಳಲ್ಲಿಯೂ ಜಯಗಳಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿರ್ದೇಶಕರಾಗಿ ಆಯ್ಕೆಯಾಗಿರುವವರು ಪ್ರಾಮಾಣಿಕವಾಗಿ ಕೆಲಸ ಮಾಡಿ ಬ್ಯಾಂಕಿಗೆ ಬರುವ ರೈತ ಸದಸ್ಯರ ಸಮಸ್ಯೆಗಳಿಗೆ ಧ್ವನಿಯಾಗಿ
ಸರ್ಕಾರದಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಕಿವಿ ಮಾತು ಹೇಳಿದರು.

RELATED ARTICLES
- Advertisment -
Google search engine

Most Popular