Friday, April 4, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಪುಷ್ಪಲತಾರಮೇಶ್ ಉಪಾಧ್ಯಕ್ಷರಾಗಿ ಹೆಚ್.ಕೆ.ಪ್ರದೀಪ್ ಆಯ್ಕೆ

ಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಪುಷ್ಪಲತಾರಮೇಶ್ ಉಪಾಧ್ಯಕ್ಷರಾಗಿ ಹೆಚ್.ಕೆ.ಪ್ರದೀಪ್ ಆಯ್ಕೆ


ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕೆ.ಆರ್.ನಗರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪುಷ್ಪಲತಾರಮೇಶ್ ಮತ್ತು
ಉಪಾಧ್ಯಕ್ಷರಾಗಿ ಹೆಚ್.ಕೆ.ಪ್ರದೀಪ್ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಸಿ.ಎಂ.ರಸ್ತೆಯಲ್ಲಿರುವ ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಹುಣಸೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಅನುಸೂಯ ಆಯ್ಕೆಯನ್ನು ಪ್ರಕಟಿಸಿದರು.

ಚುನಾವಣಾ ಸಭೆಯಲ್ಲಿ ನಿರ್ದೇಶಕರಾದ ಎಸ್.ಎಂ.ಸೋಮಣ್ಣ, ಮಂಗಳಪ್ರಸಾದ್, ಎಂ.ಎಸ್.ಹರಿಚಿದಂಬರ, ಡಿ.ಆರ್.ರಾಹುಲ್, ಬಿ.ಎಸ್.ಚಂದ್ರಹಾಸ, ಕುಳ್ಳಬೋರೇಗೌಡ, ಕೆ.ಟಿ.ಚಂದ್ರೇಗೌಡ, ಕಲಾವತಿ, ಇಂದ್ರೇಶ್, ಮಹೇಶ್, ಗಾಯಿತ್ರಮ್ಮ, ದೊಡ್ಡಯ್ಯ, ರಮೇಶ್‌ನಾಯಕ, ಕಾರ್ಯದರ್ಶಿ ನವೀನ್‌ಕುಮಾರ್ ಇದ್ದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರಲ್ಲದೆ ಶಾಸಕ ಡಿ.ರವಿಶಂಕರ್ ಮತ್ತು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಅವರಿಗೆ ಜಯಕಾರದ ಘೋಷಣೆಗಳನ್ನು ಮೊಳಗಿಸಿ ವಿಜಯೋತ್ಸವ ಆಚರಿಸಿದರು.

ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್‌ಜಾಬೀರ್, ಕೆಪಿಸಿಸಿ
ಸದಸ್ಯ ಸಿ.ಪಿ.ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ಅರ್ಜುನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ದಿಲೀಪ್‌ಗೌಡ , ಹೊಸೂರು ಡೈರಿ ಮಾಜಿ ಅಧ್ಯಕ್ಷ ಎಚ್.ಜೆ.ರಮೇಶ್ ಮತ್ತಿತರರು ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular