ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕೆ.ಆರ್.ನಗರ ಸರ್ಕಾರಿ ಪ್ರಾಥಮಿಕ ಶಾಲಾ ಉಪಾಧ್ಯಾಯರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಕಾಂತರಾಜು ಮತ್ತು ಉಪಾಧ್ಯಕ್ಷರಾಗಿ ಕೆ.ಟಿ.ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಲಿ ಅಧ್ಯಕ್ಷರಾಗಿದ್ದ ತುಳಸಿರಾಮನಾಯಕ ಮತ್ತು ಉಪಾಧ್ಯಕ್ಷರಾಗಿದ್ದ ಸೀಗವಾಳು ಕುಮಾರ್ ಅವರ ರಾಜೀನಾಮೇಯಿಂದ ಈ ಸ್ಥಾನಗಳು ತೆರವಾಗಿದ್ದವು.
ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕಾಂತರಾಜು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಟಿ.ಸ್ವಾಮಿ ಅವರನ್ನು ಹೊರತು ಪಡಿಸಿ ಬೇರೆಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಸಿಡಿಓ ರವಿ ಅವರು ಇವರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರಾದ ಶಂಕರೇಗೌಡ ಸಂಘದ ಗೌರವಾಧ್ಯಕ್ಷ ತುಳಸಿ ರಾಮ ನಾಯಕ್, ನಿರ್ದೇಶಕರಾದ ಹೆಬ್ಬಾಳು ಮಂಜೇಗೌಡ, ರುಕ್ಮಿಣಿ, ಎಂ ಕುಮಾರ್, ಶಿಗವಾಳು ಕುಮಾರ್, ಹಾಜರಿದ್ದರು.