ಕಡಬ: ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಡಬದ ಕುಂತೂರು ಶಾಲೆಯಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿತಗೊಂಡಿದ್ದರಿಂದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.