Friday, April 4, 2025
Google search engine

Homeಅಪರಾಧಕಲಬುರಗಿ: ಪತ್ನಿ, ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಕಲಬುರಗಿ: ಪತ್ನಿ, ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಕಲಬುರಗಿ : ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್‌ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶೃತಿ (35), ಮುನಿಶ್ (9), ಮೂರು ತಿಂಗಳ ಮಗು ಅನಿಶ್‌ರನ್ನು ಕೊಲೆ ಮಾಡಿದ ಬಳಿಕ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಸಂತೋಷ್ ಮನೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ-ಹೆಂಡತಿ ಮಧ್ಯೆ ಆಗಾಗ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತ ಸಂತೋಷ್ ಕೊರಳ್ಳಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular