ಪ್ರಭಾಸ್ , ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’ ಇಂದು (ಜೂನ್ 27) ಸಿನಿಮಾ ರಿಲೀಸ್ ಆಗಿದೆ. ಫಸ್ಟ್ ಡೇ, ಫಸ್ಟ್ ಶೋಗೆ ಪ್ರೇಕ್ಷಕರಿಂದ ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಲ್ಕಿ ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು, ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ ಎಂದು ಫ್ಯಾನ್ಸ್ ಕೊಂಡಾಡಿದ್ದಾರೆ.
ಇನ್ನೂ ಚಿತ್ರದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಕಥೆಯನ್ನು ಡೈರೆಕ್ಟರ್ ನಾಗ್ ಅಶ್ವೀನ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಟ್ರೈಲರ್ ಝಲಕ್‌ನಲ್ಲೇ ಆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜಗತ್ತಿನ ಮೊದಲ ಪ್ರದೇಶ ಮತ್ತು ಕೊನೆಯ ಪ್ರದೇಶ ಕಾಶಿ ಎನ್ನುವ ಮೂಲಕ ಕಲ್ಕಿ ಟ್ರೈಲರ್ ಶುರುವಾಗಿತ್ತು.
ಜಗತ್ತಿನಿಂದ ಎಲ್ಲವನ್ನೂ ಕಿತ್ತುಕೊಂಡರೆ ಎಲ್ಲವೂ ಇರುತ್ತದೆ ಎನ್ನುವ ಕುತೂಹಲಕರ ಸಂಭಾಷೆಯಣೆಯಿದೆ. 6000 ಹಿಂದಿನ ಶಕ್ತಿ ಮತ್ತೆ ಬಂದಿದೆ. ಅಳಿವು- ಉಳಿವಿಗಾಗಿ ಹೋರಾಡುವವರ ದೃಶ್ಯ ತೋರಿಸಲಾಗಿದೆ. ಭೈರವನಾಗಿ ಯುದ್ಧಕ್ಕೆ ಪ್ರಭಾಸ್ ಸಜ್ಜಾಗಿದ್ದಾರೆ. 2 ಜಗತ್ತಿನ ಹೋರಾಟವನ್ನು ಸೈನ್ಸ್ ಫಿಕ್ಷನ್ ಮೂಲಕ ಅದ್ಭುತವಾಗಿ ತೋರಿಸಿದ್ದಾರೆ. ಟ್ರೈಲರ್‌ನಿಂದ ಕುತೂಹಲ ಕೆರಳಿದ್ದ ಈ ಚಿತ್ರ, ರಿಲೀಸ್ ಬಳಿಕ ಪ್ರೇಕ್ಷಕರಿಗೆ ಉತ್ತರ ಸಿಕ್ಕಿದೆ. ಸಿನಿಮಾ ನೋಡಿ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.