Friday, April 11, 2025
Google search engine

Homeಅಪರಾಧಕಾನೂನುಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

ಬೆಂಗಳೂರು: ಪಿಲಿಕುಳ ಜೈವಿಕ ಪಾರ್ಕ್‌ನ ಸಮೀಪ ಕಂಬಳಕ್ಕೆ ಅವಕಾಶ ನೀಡಬಾರದು ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹೊರಗೂ ಕಂಬಳ ನಿಷೇಧ ಮಾಡಬೇಕು ಎಂದು ಪ್ರಾಣಿ ದಯಾ ಸಂಘಟನೆ ಪೇಟಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್‌ ಜನವರಿ 21ಕ್ಕೆ ಮುಂದೂಡಿತು.

ಶುಕ್ರವಾರ ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾ| ಎಂ.ಐ. ಅರುಣ್‌ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಬಂದ ಸಂದರ್ಭದಲ್ಲಿ ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ಅಡ್ವೋ ಕೇಟ್‌ ಜನರಲ್‌ ಅವರು ಇಂದು ಲಭ್ಯರಿಲ್ಲ, ಆದ್ದರಿಂದ ವಿಚಾರಣೆಯನ್ನು ಮುಂದೂಡುವಂತೆ ನ್ಯಾಯಲಯವನ್ನು ಕೋರಿದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಜ. 21ಕ್ಕೆ ನ್ಯಾಯಾಲಯ ಮುಂದೂಡಿತು.

RELATED ARTICLES
- Advertisment -
Google search engine

Most Popular