Monday, April 14, 2025
Google search engine

Homeರಾಜ್ಯಸುದ್ದಿಜಾಲಈ ವರ್ಷದ ದಸರಾ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಕಂಬಳ – ಡಿ.ಕೆ. ಶಿವಕುಮಾರ್ ಘೋಷಣೆ

ಈ ವರ್ಷದ ದಸರಾ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಕಂಬಳ – ಡಿ.ಕೆ. ಶಿವಕುಮಾರ್ ಘೋಷಣೆ

ಮಂಗಳೂರು (ದಕ್ಷಿಣ ಕನ್ನಡ):ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಅವರು ಶನಿವಾರ ಸಂಜೆ ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತ ಪ್ರೋತ್ಸಾಹ ನೀಡಲು ಸರಕಾರ ನಿಧ೯ರಿಸಿದೆ ಎಂದು ಅವರು ಹೇಳಿದರು.

ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು. ಜನಪದ ಸಂಸ್ಕೃತಿ ಉಳಿಸಲು ಸರಕಾರ ಸದಾ ನೆರವು ನೀಡಲಿದೆ ಎಂದು ಅವರು ಹೇಳಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಶ್ರೀಮಂತವಾಗಿದೆ. ಧಾಮಿ೯ಕವಾಗಿ ಹಲವಾರು ಪುಣ್ಯಕ್ಷೇತ್ರಗಳಿವೆ. ಅತಿ ಹೆಚ್ಚು ಮೆಡಿಕಲ್ ಇಂಜಿನಿಯರಿಂಗ್ ಕಾಲೇಜುಗಳು ಇವೆ. ಇದಕ್ಕೆ ಪೂರಕವಾಗಿ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಶೀಘ್ರವೇ ಪ್ರವಾಸೋದ್ಯಮ ಸಚಿವರೊಂದಿಗೆ ಇಲ್ಲಿಗೆ ಬಂದು ಹೊಸ ಕಾಯ೯ಕ್ರಮ, ನೀತಿ ರೂಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಾಯ೯ಕ್ರಮದಲ್ಲಿ ಶಾಸಕರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ ಮತ್ತಿತರರು ಇದ್ದರು. ಮೂಳೂರು ಅಡ್ಡೂರು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಆಲಿ ಸ್ವಾಗತಿಸಿದರು.

RELATED ARTICLES
- Advertisment -
Google search engine

Most Popular