ರಾಮನಗರ : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರೋದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆಯನ್ನ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ ಕ್ಷಮೆ ಕೇಳದೇ ಉದ್ಧಟತನ ತೋರಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಕನಕಪುರದ 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ನಾಗಾರ್ಜುನ ಗೌಡ ಪರ ವಕೀಲ ವಿನೋದ್ ಎಂಬುವವರು ಕೋರ್ಟ್ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಪ್ರಕರಣವನ್ನ ಜುಲೈ 5ಕ್ಕೆ ವಿಚಾರಣೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ.