Monday, April 21, 2025
Google search engine

Homeಸ್ಥಳೀಯಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ ಕಾರ್ಯಕ್ರಮ

ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ ಕಾರ್ಯಕ್ರಮ

ಮೈಸೂರು: ನಗರದ ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಇಂದು ಶನಿವಾರ ಸುವರ್ಣ ಸಂಭ್ರಮೋತ್ಸವದ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿ ಇತಿಹಾಸದ ಸುವರ್ಣಯುಗವನ್ನು ಮಕ್ಕಳು ತಮ್ಮ ನೃತ್ಯದ ಮೂಲಕ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಅಧ್ಯಕ್ಷ ಡಾ. ಶಾಜಿಯಾ ಅವರು ಕನ್ನಡ ನಾಡು ನುಡಿಯ ಹಿನ್ನೆಲೆಯನ್ನು ತಿಳಿಸಿ ಪ್ರತಿಯೊಬ್ಬ ಕನ್ನಡಿಗನೂ ಸಹ ಕನ್ನಡ ಸಂಸ್ಕೃತಿಯನ್ನು ಗೌರವಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಕಾರ್ಯದರ್ಶಿಗಳಾದ ಅಲ್ತಾಫ್ ಅಹ್ಮದ್ ಅವರು ಮಕ್ಕಳು ಮಾತೃಭಾಷೆಯನ್ನು ಕಲಿಯಬೇಕಾದ್ದು ಬಹಳ ಅತ್ಯವಶ್ಯಕ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಶಿವಮೂರ್ತಿ ಎಸ್, ಮುಖೋಪಾಧ್ಯ್ಯಾ ಲತಾಆನಂದ್, ಆಡಳಿತಾಧಿಕಾರಿಗಳಾದ ಸ್ಟ್ಯಾನ್ಲಿ ಪಾಲ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular