Sunday, April 20, 2025
Google search engine

Homeರಾಜ್ಯಸುದ್ದಿಜಾಲಕನ್ನಡ ರಾಜ್ಯೋತ್ಸವ : ಬರ ಪರಿಹಾರ ಕಾರ್ಯಗಳಿಗಾಗಿ ಸರಕಾರಕ್ಕೆ ರೂ.೨೧೨ ಕೋಟಿ ಪ್ರಸ್ತಾವನೆ ಸಲ್ಲಿಕೆ: ಸಚಿವ...

ಕನ್ನಡ ರಾಜ್ಯೋತ್ಸವ : ಬರ ಪರಿಹಾರ ಕಾರ್ಯಗಳಿಗಾಗಿ ಸರಕಾರಕ್ಕೆ ರೂ.೨೧೨ ಕೋಟಿ ಪ್ರಸ್ತಾವನೆ ಸಲ್ಲಿಕೆ: ಸಚಿವ ಸಂತೋಷ ಲಾಡ್

ಧಾರವಾಡ : ರಾಜ್ಯ ಸರಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳಿಂದ ಜಿಲ್ಲೆಯ ಸಾರ್ವಜನಿಕರು ಫಲಾನುಭವಿಗಳಾಗಿದ್ದು, ಜಿಲ್ಲೆಯಲ್ಲಿ ಬರಗಾಲವಿದ್ದರೂ ಜನಜಾನುವಾರಗಳಿಗೆ ಅಗತ್ಯ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬರಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸರಕಾರಕ್ಕೆ ೨೧೨ ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿದಿಂದ ಆಯೋಜಿಸಿದ್ದ ೬೮ ನೇ ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.
ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ದೊರೆತಿರುವ ಪ್ರಾಮುಖ್ಯತೆಯಂತೆ, ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಯೂ ಮಹತ್ವ ಪಡೆದಿದೆ. ಕರ್ನಾಟಕ ಏಕೀಕರಣದ ಚಳವಳಿಯು ನಮ್ಮ ಧಾರವಾಡ ನೆಲದಲ್ಲಿ ಪ್ರಾರಂಭವಾಗಿದ್ದು, ಈ ಸಂಗತಿ ನಮ್ಮೆಲ್ಲರ ಅಭಿಮಾನದ ಸಂಕೇತವಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಿದ್ದು, ಮತ್ತು ಮುಂಬರುವ ದಿನಗಳಲ್ಲಿ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.
ಶಕ್ತಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಇಲ್ಲಿಯವರೆಗೂ ೩.೭೪ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ರೂ.೭೮.೬೯ ಕೋಟಿ ಮೊತ್ತದ ಸೇವೆಯನ್ನು ಪಡೆದಿರುತ್ತಾರೆ. ಗೃಹಲಕ್ಷ್ಮೀ ಯೋಜನೆಯಡಿ ೨,೨೮,೬೯೦ ಫಲಾನುಭವಿಗಳಿಗೆ ಮಹಿಳೆಯರಿಗೆ ರೂ.೬೫.೭೪ ಕೋಟಿಯನ್ನು ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ೩,೮೭,೧೯೩ ಕುಟುಂಬಗಳಿಗೆ ರೂ.೫೩,೩೩ ಕೋಟಿಗಳನ್ನು ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ೪,೬೩,೯೮೩ ಗೃಹ ಬಳಕೆದಾರರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರಾಜೀವ ಎಂ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣಕುಮಾರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಾಟೀಲ ಶಶಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ತಹಸಿಲ್ದಾರ ದೊಡ್ಡಪ್ಪ ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular