Saturday, April 19, 2025
Google search engine

Homeರಾಜಕೀಯಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ: ವೈಯಕ್ತಿಕ ನಿರ್ಧಾರ ಎಂ ಬಿ ಎಸ್ ಯಡಿಯೂರಪ್ಪ

ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ: ವೈಯಕ್ತಿಕ ನಿರ್ಧಾರ ಎಂ ಬಿ ಎಸ್ ಯಡಿಯೂರಪ್ಪ

ಬೆಳಗಾವಿ: ಕರಡಿ ಸಂಗಣ್ಣ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ಅದು ಅವರ ವೈಯಕ್ತಿಕ ನಿರ್ಧಾರ ಎಂದಿದ್ದಾರೆ.

ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್   ಅವರು ಇಂದು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ್ದ ಬಿ ಎಸ್ ಯಡಿಯೂರಪ್ಪನವರು ಮಾಧ್ಯಮದರೊಂದಿಗೆ ಮಾತನಾಡಿ, ತಮ್ಮೊಂದಿಗೆ ಮಾತಾಡುವಂತೆ ಹೇಳಿದ್ದೆ, ಆದರೆ ಅವರು ಬಿಜೆಪಿ ಒದಗಿಸಿದ ವಿಪುಲ ಅವಕಾಶಗಳ ಹೊರತಾಗಿಯೂ ಕಾಂಗ್ರೆಸ್ ಸೇರಿದ್ದಾರೆ, ಇದೆಲ್ಲ ಸ್ವಾಭಾವಿಕ, ಯಾರೇನೂ ಮಾಡಲಾಗದು ಎಂದು ಹೇಳಿದರು.

ಬೆಳಗಾವಿಯಿಂದ ಕೊಪ್ಪಳಕ್ಕೆ ಹೋಗೋದಾಗಿ ಹೇಳಿದ ಅವರು ಎಲ್ಲೆಡೆ ಬಿಜೆಪಿಗೆ ಅನುಕೂಲಕಾರವಾದ ವಾತಾವರಣವಿದೆ. ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ಯಶ ಕಾಣಲಿದ್ದೇವೆ ಎಂದರು. ಕಾಂಗ್ರೆಸ್ ಪಕ್ಷದವರು ಲಿಂಗಾಯತ ಕಾರ್ಡ್ ಪ್ಲೇ ಮಾಡಿ ವೋಟು ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದರೆ ತಮ್ಮದೇನೂ ಅಭ್ಯಂತರವಿಲ್ಲ, ಆದರೆ ಬಿಜೆಪಿಗೆ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲ ಸಮುದಾಯದವರು ಬೇಕು ಎಂದು ಯಡಿಯೂರಪ್ಪ ಹೇಳಿದರು.

RELATED ARTICLES
- Advertisment -
Google search engine

Most Popular