ಮೈಸೂರು: ಮೈಸೂರು ಕರಾಟೆ ಅಸೋಸಿಯೇಷನ್ ವತಿಯಿಂದ ಜೂನ್ 23ರಂದು ಸ್ವಯಂ ರಕ್ಷಣೆಗಾಗಿ ಕರಾಟೆ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಸೋಷಿಯೇಷನ್ ಅಧ್ಯಕ್ಷ ಶಿವದಾಸ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಸ್ಪೋರ್ಟ್ಸ್ ಫೆವಿಲಿಯನ್ ಮಹಾರಾಜ ಕಾಲೇಜು ಹಾಕಿ ಮೈದಾನದಲ್ಲಿ ಅಂದು ಬೆಳಿಗ್ಗೆ 8ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ನಗರ ಪೊಲೀಸ್ ಆಯುಕ್ತ ಬಿ ರಮೇಶ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಎಂ ಯೋಗೇಂದ್ರ, ಮೈಸೂರು ವಿವಿ ದೈಹಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ವೆಂಕಟೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಭಾಗವಹಿಸುವರು.
ವಿಧಾನ ಪರಿಷತ್ ಮಾಜಿ ಸದಸ್ಯ ಸಿ ಎಸ್ ಅರುಣ್ ಮಾಚಯ್ಯ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು. 1500 ಕರಾಟೆ ಪಟುಗಳನ್ನು ಒಂದು ಕಡೆ ಸೇರಿಸಿ ಅವರ ಮೂಲಕ ಕರಾಟೆ ಪ್ರದರ್ಶನ ಹಾಗೂ ವಿಶ್ವಕರಾಟೆ ದಿನ ಆಚರಿಸಲಾಗುವುದು .ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮೊಬೈಲ್ ಸಂಖ್ಯೆ 9880361209, 8073906193 ಸಂಪರ್ಕಿಸಬಹುದು ಎಂದರು.
ಮೈಸೂರು ಕರಾಟೆ ಅಸೋಸಿಯೇಷನ್ ಉಪಾಧ್ಯಕ್ಷ ಎನ್ ಶಂಕರ್, ಸೋಸಲಿ ಸಿದ್ದರಾಜು, ಕಾರ್ಯದರ್ಶಿ ದೀಪಕ್ ಕುಮಾರ್, ಸಹ ಕಾರ್ಯದರ್ಶಿ ಸುನಿಲ್ ಕುಮಾರ್,ಭಾರತಿ ಇದ್ದರು.
ವಿಶ್ವ ಕರಾಟೆ ದಿನದ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯರಾದ ಎಚ್ ವಿಶ್ವನಾಥ್ ರವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ವಿಶ್ವ ಕರಾಟೆ ದಿನದ ಪೋಸ್ಟರ್ ಬಿಡುಗಡೆ ಮಾಡಿಸಲಾಯಿತು.
