Friday, October 10, 2025
Google search engine

Homeರಾಜ್ಯಕರ್ನಾಟಕ ವಿಧಾನಪರಿಷತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಮತದಾರರ ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನಪರಿಷತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಮತದಾರರ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗಾಗಿ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮತದಾರರ ನೋಂದಣಿ ನಿಯಮಗಳು, 1960 ರ ನಿಯಮ 31 (3) ರನ್ವಯ ಅಧಿಸೂಚನೆ ಹೊರಡಿಸಿದ ದಿನಾಂಕ 2025 ನೇ ಸೆಪ್ಟೆಂಬರ್ 30, ನಮೂನೆ-18 / 19ರ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್ 6, 2025. ಕರಡು ಮತದಾರರ ಪಟ್ಟಿ ಪ್ರಕಟಣೆ ದಿನಾಂಕ 2025ನೇ ನವೆಂಬರ್ 25. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ 2025ನೇ ನವೆಂಬರ್ 25 ರಿಂದ ಡಿಸೆಂಬರ್ 10 ರವರೆಗೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಅವಧಿ 2025ನೇ ಡಿಸೆಂಬರ್ 25 ಹಾಗೂ 2025ನೇ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆಗಳು ಒಳಪಡುತ್ತವೆ.

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಜಿಲ್ಲೆಯ ದಾವಣಗೆರೆ, ಜಗಳೂರು, ಹರಿಹರ ತಾಲೂಕುಗಳು ಮಾತ್ರ ಒಳಪಡುತ್ತವೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದು, ಅದರಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಗಳು ಚಾಲ್ತಿಯಲ್ಲಿರುತ್ತವೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರಾದೇಶಿಕ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular