Wednesday, July 23, 2025
Google search engine

Homeರಾಜ್ಯಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 56ನೇ ಸಂಸ್ಥಾಪನಾ ದಿನ - ಜುಲೈ 23ರಂದು ಭವ್ಯ...

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 56ನೇ ಸಂಸ್ಥಾಪನಾ ದಿನ – ಜುಲೈ 23ರಂದು ಭವ್ಯ ಕಾರ್ಯಕ್ರಮ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದ 56ನೇ ಸಂಸ್ಥಾಪನಾ ದಿನವನ್ನು ಬುಧವಾರ (ಜುಲೈ 23) ಆಯೋಜಿಸಲಾಗಿದೆ.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳೂ ಆಗಿರುವ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಗೌರವ್ ಗುಪ್ತ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಇದೇ ವೇಳೆ ನಿಗಮದಲ್ಲಿ 25 ವರ್ಷ ಸೇವೆ ಸಲ್ಲಿಸಿದ ಹಿರಿಯ ಸಿಬ್ಬಂದಿಯನ್ನು ಗೌರವಿಸಲಾಗುತ್ತದೆ ಹಾಗೂ ನಿವೃತ್ತ ಸಿಬ್ಬಂದಿಯನ್ನು ಸನ್ಮಾನಿಸಲಾಗವುದು. ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ನಿಗಮದ ಸಿಬ್ಬಂದಿಯ ಮಕ್ಕಳಿಗೆ ಚಿನ್ನದ ನಾಣ್ಯಗಳನ್ನು ನೀಡಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular