ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವತಿಯಿಂದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ತಾಲ್ಲೂಕು ಪಂಚಾಯತ್ ಗೆ ಇಂದು ಮುತ್ತಿಗೆ ಹಾಕಲಾಯಿತು.
ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ನೇತೃತ್ವದಲ್ಲಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ತಾಲ್ಲೂಕು ಪಂಚಾಯತಿ ವರೆಗೆ ಮೆರವಣಿಗೆ ಮೂಲಕ ಸಾಗಿ ತಾಲ್ಲೂಕು ಪಂಚಾಯತ್ ಗೆ ಮುತ್ತಿಗೆ ಹಾಕಲಾಯಿತು.
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಉದ್ಯೋಗ ಖಾತ್ರಿಯ ಬಾಕಿ ಕೂಲಿ, ಪ್ರೋತ್ಸಾಹಧನ, ನಿವೇಶನ ರಹಿತರಿಗೆ ನಿವೇಶನ, ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರ ವಿತರಣೆಗೆ ಒತ್ತಾಯಿಸಿದರು.
ಬಾಕಿ ಕೂಲಿ ನೀಡದೆ ಸರ್ಕಾರ ನಿರ್ಲಕ್ಷ್ಯ ತೋರಿದೆ. ಜಲಜೀವನ್ ಮಿಷನ್ ಮೀಟರ್ ಅಳವಡಿಕೆ ರದ್ದುಗೊಳಿಸಬೇಕು. ಬೇಡಿಕೆ ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.