ಚಾಮರಾಜನಗರ: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಮೇ 2ರಂದು ವೇಳಾ ಪಟ್ಟಿ ಪ್ರಕಟಿಸಿದ್ದು, ಚುನಾವಣಾ ವೇಳಾಪಟ್ಟಿಯ ವಿವರ ಇಂತಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆಗೆ ಮೇ 9ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮ ನಿರ್ದೇಶನ ಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮ ನಿರ್ದೇಶನ ಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 20 ಕಡೆಯ ದಿನವಾಗಿದೆ. ಜೂನ್ 3ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಜೂನ್ 12ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ಸಂಬಂಧ ಹೊಸ ಸೇರ್ಪಡೆ ಅರ್ಜಿಗಳನ್ನು ಸ್ವೀಕರಿಸಿ ಮತದಾರರ ಪಟ್ಟಿಗೆ ಸೇರಿಸಲು ನಾಮಪತ್ರ ಸ್ವೀಕೃತಿಯ ಅಂತಿಮ ದಿನದ 10 ದಿನಗಳ ಹಿಂದೆ ಅಂದರೆ, ಮೇ 6 ರಂದು ಸಂಜೆ 5.30 ಗಂಟೆಯೊಳಗೆ ಮಾತ್ರ ಸ್ವೀಕೃತಿಸಲ್ಪ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಿ ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.