Wednesday, March 4, 2026
Google search engine

Homeರಾಜಕೀಯಕರ್ನಾಟಕ ಆರ್ಥಿಕತೆ ಪಾತಾಳಕ್ಕೆ: ಸಿಎಂ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಕರ್ನಾಟಕ ಆರ್ಥಿಕತೆ ಪಾತಾಳಕ್ಕೆ: ಸಿಎಂ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು : ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥಶಾಸ್ತ್ರಜ್ಞ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾಲ-ಶೂಲದ ಹರಿಕಾರ ಸಾಲರಾಮಯ್ಯ ಅವರೇ, 2025-26ರ ಅಂತ್ಯದ ವೇಳೆಗೆ ರಾಜ್ಯದ ಒಟ್ಟು ಸಾಲದ ಮೊತ್ತ 8.14 ಲಕ್ಷ ಕೋಟಿಯಷ್ಟಾಗಲಿದೆ ಮತ್ತು ಇದು ರಾಜ್ಯದ ಜಿಎಸ್‌‍ಡಿಪಿಯ ಶೇ26.5ರಷ್ಟಾಗಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಅಂದಾಜಿಸಿದ್ದು, ಇದರಿಂದ 7 ಕೋಟಿ ಕರ್ನಾಟಕದ ತಲಾ ಸಾಲ 1,16,258 ರೂಪಾಯಿಗಳಿಗೆ ಏರಲಿದೆ ಎಂದಿದ್ದಾರೆ.

ಇನ್ನೂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಾಲರಾಮಯ್ಯನವರು ಜಾರಿಗೆ ತಂದಿರುವ ಅವೈಜ್ಞಾನಿಕ ಗ್ಯಾರೆಂಟಿಗಳು, ಮಾಡಿರುವ ಸಾಲು ಸಾಲು ಹಗರಣಗಳು ಕನ್ನಡಿಗರ ಮೇಲೆ ಲಕ್ಷಾಂತರ ಕೋಟಿ ಸಾಲದ ಹೊರೆ ಹೊರಿಸಿ ಕರ್ನಾಟಕದ ಆರ್ಥಿಕ ಶಿಸ್ತನ್ನು ಹಳಿ ತಪ್ಪಿಸಿದ್ದು, ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಂದುವರೆದು, ಸಿಎಂ ಸಿದ್ದರಾಮಯ್ಯನವರೇ, ತಮ್ಮ ಕೃಪೆಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಈಗಾಗಲೇ ಪಾತಾಳಕ್ಕೆ ಕುಸಿದಿರುವಾಗ, ಯಾವ ಮುಖ ಇಟ್ಟುಕೊಂಡು ಈಗ ಇನ್ನೊಂದು ಬಜೆಟ್‌ ಮಂಡಿಸುತ್ತೀರಿ ಸ್ವಾಮಿ? ಕನ್ನಡಿಗರ ಕ್ಷಮೆ ಕೇಳಿ, ರಾಜೀನಾಮೆ ಕೊಟ್ಟು ಹೊರಡಿ. ಕರ್ನಾಟಕವನ್ನು ಉಳಿಸಿ ಎಂದು ಅಶೋಕ್‌ ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular