Friday, April 11, 2025
Google search engine

Homeರಾಜ್ಯಸುದ್ದಿಜಾಲಕಾವೇರಿ ಕಿಚ್ಚು: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕಾವೇರಿ ಕಿಚ್ಚು: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡುಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ ರೈತ ಸಂಘದ ಕಾರ್ಯಕರ್ತರು ಇಂದು ಡಿಸಿ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ಹೊರಹಾಕಿದರು.

ನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಕಾವೇರಿ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳು ಬಿಎಸ್‌ಎನ್ ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಮಾರಿಗುಡಿ ಸಮೀಪ ಇರುವ ಬಿಎಸ್‌ಎನ್‌ಎಲ್ ಕಚೇರಿಗೆ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪ್ರತಿಭಟನಾಕರರು ಮುತ್ತಿಗೆ ಹಾಕಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ನಮಗೇ ಕುಡಿಯಲು ನೀರಿಲ್ಲ. ಆದರೆ ತಮಿಳುನಾಡು ೩ನೇ ಬೆಳೆಗೆ ನೀರು ಕೇಳುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ತಮಿಳುನಾಡು ಇದೇ ರೀತಿ ಕ್ಯಾತೆ ತೆಗೆಯುತ್ತಿದ್ದರೇ ತಮಿಳು ಚಿತ್ರ, ತಮಿಳು ವಾಹನಗಳಿಗೆ ನಿರ್ಬಂಧ ಹೇರುತ್ತೇವೆ” ಎಂದು ಎಚ್ಚರಿಕೆ ನೀಡಿದರು. ಕಾವೇರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಇಷ್ಟೆಲ್ಲಾ ಅನ್ಯಾಯವಾದರೂ ಕೂಡ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ. ಕೂಡಲೇ ಮಧ್ಯ ಪ್ರವೇಶಿಸಿ ವಿವಾದವನ್ನು ಇತ್ಯರ್ಥ ಮಾಡಬೇಕು. ಕರ್ನಾಟಕ ಸರ್ಕಾರದಿಂದ ರಾಜ್ಯದ ರೈತರಿಗೆ, ಜನರಿಗೆ ಅನ್ಯಾಯವಾಗುತ್ತಿದೆ. ಇದನ್ನು ಸಹಿಸಲಾಗದು. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕೆಂದು ಎಂದು ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular