ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಹಿನ್ನಲೆ ಸಕ್ಕರೆನಾಡು ಮಂಡ್ಯದಲ್ಲಿ ರೈತರ ಹೋರಾಟ ತೀವ್ರಗೊಂಡಿದ್ದು, ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಕಾವೇರಿ ನದಿಗಿಳಿದು ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಸರ್ಕಾರ, ಡಿಸಿಎಂ ಡಿಕೆಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೌನವಾಗಿರುವ ಜಿಲ್ಲೆಯ ಶಾಸಕರ ವಿರುದ್ಧವೂ ರೈತರು ಕಿಡಿಕಾರಿದ್ದಾರೆ.
ಕೂಡಲೇ ತಮಿಳುನಾಡಿಗೆ ಹರಿಸ್ತಿರೋ ನೀರು ನಿಲ್ಲಿಸಲು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ನಂಜುಂಡೇಗೌಡ, ಕೃಷ್ಣೇಗೌಡ, ಸುನೀಲ್ ಸೇರಿ ಹಲವರು ಭಾಗಿಯಾಗಿದ್ದಾರೆ.