Friday, April 4, 2025
Google search engine

Homeರಾಜ್ಯಕೆಇಎ: ವೆಬ್‌ಸೈಟ್‌ನಲ್ಲಿ ಸಿಇಟಿ ಪಠ್ಯಕ್ರಮ ಪ್ರಕಟಿಸಿದ ಪರೀಕ್ಷಾ ಪ್ರಾಧಿಕಾರ

ಕೆಇಎ: ವೆಬ್‌ಸೈಟ್‌ನಲ್ಲಿ ಸಿಇಟಿ ಪಠ್ಯಕ್ರಮ ಪ್ರಕಟಿಸಿದ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2025ನೇ ಸಾಲಿನಲ್ಲಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ವೆಬ್‌ಸೈಟ್‌ನಲ್ಲಿ ಹಾಕಿದ್ದು, ಅದನ್ನು ನೋಡಿಕೊಂಡೇ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎನ್‌ಸಿಆರ್‌ಟಿಸಿ ಪಠ್ಯಕ್ರಮ ಹಾಗೂ ಶಾಲಾ ಶಿಕ್ಷಣ (ಪಿಯು) ಇಲಾಖೆ ಪ್ರಕಟಿಸಿರುವ ಪಠ್ಯ ಪುಸ್ತಕಗಳನ್ನು ಆಧಾರವಾಗಿ ಇರಿಸಿಕೊಂಡು ಈ ಪಠ್ಯಕ್ರಮ ರಚಿಸಲಾಗಿದೆ. ಇದನ್ನು ಪಿಯು ಕಾಲೇಜುಗಳ ವಿಷಯ ತಜ್ಞರಿಂದಲೂ ಪರಿಶೀಲನೆ ಮಾಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷದ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ 50ಕ್ಕಿಂತ ಹೆಚ್ಚು ಪಠ್ಯೇತರ ಪ್ರಶ್ನೆಗಳು ಕೇಳಿದ್ದರಿಂದ ವಿವಾದ ಸೃಷ್ಟಿಯಾಗಿದ್ದ ಹಿನ್ನೆಲೆಯಲ್ಲಿ ಈ ಬಾರಿ ಕೆಇಎ ಮತ್ತು ಪಿಯು ಇಲಾಖೆ ಪಠ್ಯವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಕ್ರಮ ಕೈಗೊಂಡಿದೆ.

RELATED ARTICLES
- Advertisment -
Google search engine

Most Popular