ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಫಲಿತಾಂಶ ಕುರಿತು ಆಕ್ಷೇಪಣೆಗಳಿದ್ದಲ್ಲಿ ಆ.೩೦ರ ಮಧ್ಯಾಹ್ನ ೧೨ರ ಒಳಗೆ ಕೆಇಎ ಇ-ಮೇಲ್ keaauthority-ka@nic.in ಗೆ ಕಳುಹಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.
ಕೆ-ಸೆಟ್ ಅರ್ಜಿ ಸಲ್ಲಿಕೆಗೆ ಸೆ.೨ರವರೆಗೆ ಅವಕಾಶ: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್-೨೪) ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.೨ ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.೩ ಕೊನೆ ದಿನ.