ಉತ್ತರಾಖಂಡ: MI-17 ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥನಲ್ಲಿ ಪತನಗೊಂಡಿದೆ. ಉತ್ತರಾಖಂಡದ ಕೇದಾರನಾಥದಿಂದ ಗೌಚಾರ್‌ಗೆ ಏರ್ ಲಿಫ್ಟ್ ಮಾಡಲಾಗುತ್ತಿದ್ದ ವೇಳೆ ಈ ದುರಂತ ನಡೆದಿದೆ.
ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಆಕಸ್ಮಿಕ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಕೂಡ ವೈರಲ್ ಆಗಿದೆ. ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಲಿಂಚೋಲಿಯ ಮಂದಾಕಿನಿ ನದಿಯ ಬಳಿ ಪತನಗೊಂಡಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.