ನವದೆಹಲಿ: ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಅಂದರೆ 60 ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಘೋಷಿಸಿದೆ.
ಈ ಬಗ್ಗೆ ಮಹತ್ವದ ಪ್ರಕಟಣೆಯಲ್ಲಿ ಹೊರಡಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ದೆಹಲಿಯಲ್ಲಿರುವ ನಮ್ಮ ಎಲ್ಲಾ ಹಿರಿಯ ನಿವಾಸಿಗಳಿಗೆ ಅರವಿಂದ್ ಕೇಜ್ರಿವಾಲ್ ಸರ್ಕಾರದಿಂದ ಇದು ಗ್ಯಾರಂಟಿ ಯೋಜನೆ ಎಂದು ಭರವಸೆ ನೀಡಿದ್ದಾರೆ.
ಇಂದು ನಾನು ಹಿರಿಯ ನಾಗರಿಕರಿಗಾಗಿ ಸಂಜೀವನಿ ಯೋಜನೆಯನ್ನು ಘೋಷಿಸುತ್ತಿದ್ದೇನೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತ ಆರೋಗ್ಯ ಸೇವೆ ಸಿಗಲಿದೆ. ಚಿಕಿತ್ಸೆಯ ವೆಚ್ಚದ ಮೇಲೆ ಯಾವುದೇ ಹೆಚ್ಚಿನ ಮಿತಿ ಇರುವುದಿಲ್ಲ. ಇದಕ್ಕೆ ನೋಂದಣಿ ಒಂದು ಅಥವಾ ಎರಡು ದಿನದಲ್ಲಿ ಪ್ರಾರಂಭವಾಗುತ್ತದೆ. ಆಪ್ ಕಾರ್ಯಕರ್ತರು ನೋಂದಣಿಗಾಗಿ ನಿಮ್ಮ ಮನೆಗೆ ಬರುತ್ತಾರೆ. ಅವರು ನಿಮಗೆ ಕಾರ್ಡ್ ನೀಡುತ್ತಾರೆ, ಅದನ್ನು ಸುರಕ್ಷಿತವಾಗಿ ಇರಿಸಿ. ನಾವು ಅಧಿಕಾರಕ್ಕೆ ಬಂದ ನಂತರ ಚುನಾವಣೆಯ ನಂತರ ಈ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಎಂದು ಘೋಷಿಸಿದ್ದಾರೆ.