Friday, April 4, 2025
Google search engine

Homeರಾಜಕೀಯಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಜಗದೀಶ್ ಶೆಟ್ಟರ್ ವಾಗ್ದಾಳಿ

ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಅರವಿಂದ್ ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ದೆಹಲಿ ಚುನಾವಣಾ ಫಲಿತಾಂಶದ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣ, ಕರ್ನಾಟಕ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಡಬಲ್ ಇಂಜಿನ್ ಸರ್ಕಾರ ಎಲ್ಲಿದೆ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ. ದೆಹಲಿ ಜನ ಮೋದಿ ನಾಯಕತ್ವ ಒಪ್ಪಿದ್ದಾರೆ. ದೆಹಲಿಯನ್ನು ಅಭಿವೃದ್ಧಿ ಮಾಡೋದಾಗಿ ಮೋದಿ ಹೇಳಿದ್ದಾರೆ. ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದರು.

RELATED ARTICLES
- Advertisment -
Google search engine

Most Popular