ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಅದರಂತೆ ಇಂದು(ಸೆ.೨೯) ಕರ್ನಾಟಕ ಬಂದ್‌ಗೆ ಕರೆ ನೀಡಿದೆ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಕೈಲಿಡಿದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ ೨೦ ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು, ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.
ಬಂದ್ ಹಿನ್ನೆಲೆ : ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆಗುತ್ತಿಲ್ಲ. ಹೀಗಾಗಿ ವ್ಯಾಪಾರಸ್ಥರು ಹೂಗಳನ್ನು ದಾರಿಗೆ ಎಸೆದು ಹೋಗುತ್ತಿದ್ದಾರೆ. ಹೌದು, ಕಡಿಮೆ ಬೆಲೆ ಕೊಡುವುದಕ್ಕೆ ಮುಂದಾದರೂ ಜನರು ಹೂಗಳನ್ನ ಖರೀದಿ ಮಾಡುತ್ತಿಲ್ಲ. ಜೊತೆಗೆ ಗ್ರಾಹಕರು ಮಾರ್ಕೆಟ್‌ಗೆ ಬಂದಿಲ್ಲ. ಈ ಹಿನ್ನಲೆ ವ್ಯಾಪರ ವಿಲ್ಲದೇ ಮನೆಗಳಿಗೆ ಹೋಗುತ್ತಿದ್ದಾರೆ.