Saturday, April 19, 2025
Google search engine

Homeಆರೋಗ್ಯಕೇರಳ: ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ದೃಢ

ಕೇರಳ: ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ದೃಢ

ಅಲಪ್ಪುಳ: ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ಏಕಾಏಕಿ ವರದಿಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.‌

ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1ರ ಪ್ರದೇಶದಲ್ಲಿ ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರಲ್ಲಿ ಸಾಕಿರುವ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನಲೆ ಮಾದರಿಗಳನ್ನು ಪರೀಕ್ಷೆಗಾಗಿ ಭೋಪಾಲ್‌ನ ಲ್ಯಾಬ್‌ ಗೆ ಕಳುಹಿಸಿದಾಗ ಏವಿಯನ್ ಇನ್ಫ್ಲುಯೆನ್ಸ (H5N1) ರೋಗ ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ರ್‍ಯಾಪಿಡ್‌ ಆಕ್ಷನ್‌ ಫೋರ್ಸ್‌ ತಂಡವನ್ನು ರಚಿಸಿ, ಆದಷ್ಟು ಬೇಗ ಪಶು ಕಲ್ಯಾಣ ಇಲಾಖೆಯಿಂದ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಮನುಷ್ಯರಿಗೆ ರೋಗ ಹರಡುವ ಸಾಧ್ಯತೆ ಇಲ್ಲದಿರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

RELATED ARTICLES
- Advertisment -
Google search engine

Most Popular