Friday, April 11, 2025
Google search engine

Homeಅಪರಾಧಕಾನೂನುಮಲಯಾಳಂ ಚಿತ್ರ ನಟ, ಶಾಸಕ, ಮುಕೇಶ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಮಲಯಾಳಂ ಚಿತ್ರ ನಟ, ಶಾಸಕ, ಮುಕೇಶ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಕೊಚ್ಚಿ: ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಟಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ೩೭೬ (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಅಪರಾಧ ನಡೆದಿರುವ ಹಿನ್ನೆಲೆಯಲ್ಲಿ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಟಿಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ನ್ಯಾಯಮೂರ್ತಿ ಕೆ.ಹೇಮಾ ಸಮಿತಿಯ ವರದಿ ಬಹಿರಂಗವಾದ ಬೆನ್ನಲ್ಲೇ ಸಂತ್ರಸ್ತೆಯರು ಆರೋಪಗಳನ್ನು ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿಗಳ ವಿರುದ್ದ ದಾಖಲಾದ ಮೂರನೇ ಎಫ್‌ಐಆರ್ ಇದಾಗಿದೆ.

RELATED ARTICLES
- Advertisment -
Google search engine

Most Popular