Saturday, April 5, 2025
Google search engine

HomeUncategorizedರಾಷ್ಟ್ರೀಯಕೇರಳ ಭೂಕುಸಿತ: ವಯನಾಡು ಸೇರಿ ನೆರೆಯ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದ IMD

ಕೇರಳ ಭೂಕುಸಿತ: ವಯನಾಡು ಸೇರಿ ನೆರೆಯ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದ IMD

ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಈವರೆಗೆ 49 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ವಯನಾಡು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇಂದು (ಮಂಗಳವಾರ) ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ಪುರಂ, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಬುಧವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂಡಕ್ಕಾಯ್‌, ಚೂರಲ್ಮಲಾ, ಅತ್ತಮಲಾ ಮತ್ತು ನೂಳಪ್ಪುಳ ಗ್ರಾಮಗಳು ಭೂ ಕುಸಿತದ ಪರಿಣಾಮ ಎದುರಿಸುತ್ತಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳನ್ನು ಬಳಸಲಾಗಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಸೇರಿದಂತೆ ಜಿಲ್ಲಾಡಳಿತವೂ ಸ್ಥಳದಲ್ಲಿ ಬೀಡು ಬಿಟ್ಟಿದೆ.

RELATED ARTICLES
- Advertisment -
Google search engine

Most Popular