Tuesday, April 22, 2025
Google search engine

Homeರಾಜ್ಯಕೇರಳ ಲೋಕಸಭಾ ಚುನಾವಣೆ: ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಎಸ್‌ಡಿಪಿಐ

ಕೇರಳ ಲೋಕಸಭಾ ಚುನಾವಣೆ: ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಎಸ್‌ಡಿಪಿಐ

ತಿರುವನಂತಪುರಂ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವನ್ನು ಬೆಂಬಲಿಸುವುದಾಗಿ ಎಸ್‌ಡಿಪಿಐ ಪ್ರಕಟಿಸಿದೆ.

ಕೇರಳದಲ್ಲಿ ನಮಗೆ ಎರಡು ಜಾತ್ಯತೀತ ರಂಗಗಳಿವೆ. ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಕಾಂಗ್ರೆಸ್ ಮುನ್ನಡೆಸುತ್ತಿರು ವುದರಿಂದ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲಿಸಲು ನಿರ್ಧರಿಸಿದ್ದೇವೆ. ಬಿಜೆಪಿ ಸರಕಾರವು ಸಂವಿಧಾನ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದು, ಪ್ರಜಾತಂತ್ರದಲ್ಲಿ ನಂಬಿಕೆ ಇರುವವರು ಇದನ್ನು ವಿರೋಧಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಾತ್ಯತೀತರನ್ನು ಬೆಂಬಲಿಸುವುದು ನಮ್ಮ ನೀತಿಯಾಗಿದೆ ಎಂದೂ ಅವರು ಹೇಳಿದ್ದಾರೆ.

ಎಸ್‌ಡಿಪಿಐ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಸನ್, ಎಸ್‌ಡಿಪಿಐ ನಾಯಕರೊಂದಿಗೆ ಯುಡಿಎಫ್ ಯಾವುದೇ ಚರ್ಚೆ ನಡೆಸಿಲ್ಲ ಅಥವಾ ಲೋಕಸಭಾ ಚುನಾವಣೆಗಾಗಿ ಆ ಪಕ್ಷದೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇರಳದಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಎಸ್‌ಡಿಪಿಐ ನಿರ್ಧರಿಸಿದ್ದು, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದ ೧೮ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular