ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಪಟ್ಟಣದ ಊಟಿ ಸರ್ಕಲ್ ಬಳಿ ನಡೆದಿದೆ. ಪಟ್ಟಣದ ನಿವಾಸಿ ಮಣಿ(೪೪) ಬಂಧಿತ ಆರೋಪಿ. ಈತ ಕೇರಳದಿಂದ ಅಕ್ರಮವಾಗಿ ಲಾಟರಿ ತಂದು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ ನೇತೃತ್ವದಲ್ಲಿ ದಾಳಿ ನಡೆಸಿ ೪.೬೦೦ ರೂ. ಮೌಲ್ಯದ ಲಾಟರಿ ಹಾಗು ಬಂಧತನ ಬಳಿಯಿದ್ದ ೧೦ ಸಾವಿರದ ೬೦೦ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ಗುಂಡ್ಲುಪೇಟೆ ಠಾಣೆ ಪೊಲೀಸ್ ಪೇದೆಗಳಾದ ಲೋಕೇಶ್, ಪ್ರಭುಸ್ವಾಮಿ ಇತರರು ಭಾಗವಹಿಸಿದ್ದರು.