Tuesday, January 13, 2026
Google search engine

Homeರಾಜ್ಯಎರುಮಲೈಯಲ್ಲೇ ಅಯ್ಯಪ್ಪ ಭಕ್ತರ ವಾಹನ ನಿಲ್ಲಿಸಿದ ಕೇರಳ ಪೊಲೀಸರು

ಎರುಮಲೈಯಲ್ಲೇ ಅಯ್ಯಪ್ಪ ಭಕ್ತರ ವಾಹನ ನಿಲ್ಲಿಸಿದ ಕೇರಳ ಪೊಲೀಸರು

ಕೇರಳ : ಹಲವು ದಿನಗಳ ಕಾಲ ಅಯ್ಯಪ್ಪನ ಮಾಲೆ ಧರಿಸಿ ವ್ರತ ಮಾಡಿ ಇದೀಗ ಮಕರ ಜ್ಯೋತಿ ನೋಡಲು ದೇಶದ ಮೂಲೆ ಮೂಲೆಗಳಿಂದ ಶಬರಿಮಲೆಯತ್ತ ಹೊರಟ್ಟಿದ್ದಾರೆ. ಆದ್ರೆ,  ಕರ್ನಾಟಕದ ಶಬರಿಮಲೆ ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ. ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ.

ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ, ಸೇರಿದಂತೆ ವಿವಿಧ ಜಿಲ್ಲೆಯಿಂದ ತೆರಳಿದ ಅಯ್ಯಪ್ಪ ಮಾಲಾಧಾರಿಗಳು ಕಂಗಾಲಾಗಿದ್ದು, ಟಿಪಿ ಕಟ್ಟಿ ಬಂದರೂ ಸಹ ನಮ್ಮ ವಾಹನಗಳನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಕೇರಳ ಪೊಲೀಸರ ವಿರುದ್ಧ ಅಯ್ಯಪ್ಪ ಭಕ್ತರು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದು, ಕೇರಳ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಾಹನ ಬಾಡಿಗೆ ಮಾಡಿಕೊಂಡು ಬಂದಿದ್ದೇವೆ. ಮತ್ತೆ ಕೇರಳ ಬಸ್ ಗಳಿಗೆ ಹಣ ಕೊಟ್ಟು ಹೋಗಬೇಕು ಅಂತಿದ್ದಾರೆ. ಇದು ಕೇರಳ ಸರಕಾರದಿಂದ ನಮ್ಮ ಮೇಲಾಗ್ತಿರುವ ದೌರ್ಜನ್ಯ. ಇದರಿಂದ ಕೂಡಲೇ ಸಿಎಂ ಸಿದ್ದರಾಮಯ್ಯನವರು ಕೇರಳ ಸರಕಾರದ‌ ಜೊತೆ ಮಾತಾಡಿ ನಮ್ಮ ವಾಹನ ಬಿಡಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular