Thursday, April 3, 2025
Google search engine

Homeರಾಜ್ಯರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದ KERC

ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದ KERC

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)ವೂ ಕೂಡ ಬೆಲೆ ಏರಿಕೆಯ ಶಾಕ್ ನೀಡಿದೆ ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ಈ ಕುರಿತು ಮಾತನಾಡಿರುವ ಸಚಿವ ಶರಣಪ್ರಕಾಶ್‌ ಪಾಟೀಲ್, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular