Monday, July 13, 2026
Google search engine

Homeಅಪರಾಧನಾಲ್ಕು ವರ್ಷಗಳ ಬಳಿಕ NIA ಬಲೆಗೆ ಬಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು

ನಾಲ್ಕು ವರ್ಷಗಳ ಬಳಿಕ NIA ಬಲೆಗೆ ಬಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಯಶಸ್ಸು ಸಾಧಿಸಿದ್ದು, ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್‌ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಷಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿವಾಸಿ ಅಬ್ದುಲ್ ನಾಸೀರ್ (41) ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ ಇವರಿಬ್ಬರ ಬಂಧನಕ್ಕೆ NIA ತಲಾ ₹2 ಲಕ್ಷ ಬಹುಮಾನ ಘೋಷಿಸಿತ್ತು. ನೌಷಾದ್ ನಕಲಿ ಗುರುತಿನೊಂದಿಗೆ ತಲೆಮರೆಸಿಕೊಂಡಿದ್ದು, ಖಚಿತ ಮಾಹಿತಿಯ ಆಧಾರದ ಮೇಲೆ ಬೆಂಗಳೂರು ಸಮೀಪದ ಹೊಸೂರಿನಲ್ಲಿ NIA ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.

ಮತ್ತೊಂದೆಡೆ, ಕೇರಳದ ಕೊಚ್ಚಿಯಲ್ಲಿ ಅಡಗಿದ್ದ ಅಬ್ದುಲ್ ನಾಸೀರ್‌ನನ್ನು ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದ್ದು, 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದರು. ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದು, ತನಿಖೆಯನ್ನು ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿತ್ತು.

RELATED ARTICLES
- Advertisment -
Google search engine

Most Popular