Saturday, April 19, 2025
Google search engine

Homeರಾಜ್ಯನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ : ಡಿ.ಕೆ. ಶಿವಕುಮಾರ್

ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ : ಡಿ.ಕೆ. ಶಿವಕುಮಾರ್


ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಕೆಲವು ಖದೀಮ ಅಧಿಕಾರಿಗಳಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬಿಜೆಪಿ ಅವಧಿಯಲ್ಲಿ ನಿಗಮಗಳಲ್ಲಿ ೩೦೦ ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಆ ಅವಧಿಯಲ್ಲಿದ್ದ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಾಡಿದ್ದಾರೆ. ಅಂತಹ ಪ್ರಕರಣಗಳನ್ನು ನಾವು ಪರಿಶೀಲಿಸುತ್ತೇವೆ ಎಂದರು. ಎಲ್ಲ ನಿಗಮಗಳ ಹಣವನ್ನು ಸರ್ಕಾರ ಹಿಂಪಡೆಯುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಿಗಮಗಳಲ್ಲಿ ಪಾರದರ್ಶಕತೆ ತರಲು ನಾವು ಮುಂದಾಗಿದ್ದೇವೆ. ನಿಗಮಗಳ ಅಧ್ಯಕ್ಷರುಗಳಿಗೆ ಈ ವಿಷಯ ಹೇಳಿದ್ದೇವೆ. ನಿಗಮಗಳನ್ನು ಆರ್ಥಿಕ ಇಲಾಖೆಯ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸರ್ಕಾರ ಮುಂದಾಗಿದೆ ಎಂದರು.

RELATED ARTICLES
- Advertisment -
Google search engine

Most Popular