Friday, April 4, 2025
Google search engine

Homeರಾಜ್ಯಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಮಲ್ಲಿಕಾರ್ಜುನ ಖರ್ಗೆ

ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಅಂಬೇಡ್ಕರ್ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ವಿರೋಧಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಖರ್ಗೆ ಅವರು ರಾಜ್ಯಸಭಾ ಸಭಾಪತಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಮಾಡಿದ ಅಪಮಾನ ಮತ್ತು ಸದನದ ಅವಹೇಳನಕ್ಕೆ ಸಮಾನವಾಗಿದೆ. ರಾಜ್ಯಸಭೆಯ ಕಾರ್ಯವಿಧಾನ ಮತ್ತು ವ್ಯವಹಾರದ ನಿಯಮಗಳ ನಿಯಮ 188ರ ಅಡಿಯಲ್ಲಿ ಗೃಹ ವ್ಯವಹಾರಗಳ ಸಚಿವರಾದ ಅಮಿತ್ ಶಾ ಅವರ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಅನ್ನು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಡಿಸೆಂಬರ್ 17ರಂದು, ರಾಜ್ಯಸಭೆಯಲ್ಲಿ ‘ಭಾರತದ ಸಂವಿಧಾನದ 75 ವರ್ಷಗಳ ವೈಭವದ ಪಯಣ’ ಕುರಿತ ಚರ್ಚೆಗೆ ನೀಡಿದ ಉತ್ತರದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಂತೆ ‘ಅವಮಾನಕರ ಮತ್ತು ಮಾನಹಾನಿಕರ’ ಹೇಳಿಕೆ ನೀಡಿದ್ದರು ಎಂದು ಖರ್ಗೆ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular