Tuesday, April 22, 2025
Google search engine

Homeರಾಜ್ಯಸುದ್ದಿಜಾಲಕಿತ್ತೂರು ಉತ್ಸವ ಪೂರ್ವಭಾವಿ ಸಭೆ

ಕಿತ್ತೂರು ಉತ್ಸವ ಪೂರ್ವಭಾವಿ ಸಭೆ

ಬೆಳಗಾವಿ: “ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ‌ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಬುಧವಾರ(ಅ.4) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ದಿನಗಳ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕನಿಷ್ಠ ಮೂರು ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ. ಇದಕ್ಕಾಗಿ ಪ್ರಯತ್ನಿಸಲಾಗುವುದು. ಈಗಾಗಲೇ ಐದು ಕೋಟಿ ರೂಪಾಯಿ ನೀಡುವಂತೆ ಪ್ರಸ್ತಾವನೆ ಕಳಿಸಲಾಗಿದೆ.

ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ಖರ್ಚು: ಲೋಕೋಪಯೋಗಿ ಇಲಾಖೆಯಿಂದ ಮುಂದಿನ ಉತ್ಸವದ ವೇಳೆಗೆ ಕನಿಷ್ಠ ಐದು ಕೋಟಿ ರೂಪಾಯಿ ಅನುದಾನ‌ವನ್ನು ಕಿತ್ತೂರು ಪಟ್ಟಣದಲ್ಲಿ ಅಭಿವೃದ್ಧಿಗಾಗಿ ಖರ್ಚು ಮಾಡಲಾಗುವುದು. ಈ ಹಣದಲ್ಲಿ ವೀರ ಹೋರಾಟಗಾರರ ಭಾವಚಿತ್ರಗಳ ಅನಾವರಣ, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಅವರು ಘೋಷಿಸಿದರು.

ಕಿತ್ತೂರು ಉತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು. ದಸರಾ ಮಾದರಿಯಲ್ಲಿ ಉತ್ಸವ ಆಗಬೇಕು ಎಂಬುದು ಎಲ್ಲರ ಆಶಯವಾಗಿದೆ. ಕಿತ್ತೂರು ಇತಿಹಾಸದ ಮೆರಗು ಸಾರುವಂತಹ ಛಾಯಾಚಿತ್ರಗಳ ಪ್ರದರ್ಶನವನ್ನು ಮುಂದಿನ‌ ವರ್ಷದಿಂದ ಆರಂಭಿಸಲಾಗುವುದು. ಸ್ಥಳೀಯ ಕಲಾವಿದರಿಗೆ ಹಾಗೂ ನಿರೂಪಕರಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

50 ಶೌಚಾಲಯಗಳ ನಿರ್ಮಾಣ- ಕೆರೆ ಅಭಿವೃದ್ಧಿ ಭರವಸೆ: ಕಿತ್ತೂರು ಪ್ರವಾಸಿ ತಾಣವಾಗಿರುವುದರಿಂದ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ 50 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗುವುದು. ಇದಕ್ಕಾಗಿ ಪಟ್ಟಣ ಪಂಚಾಯತಿ ಮತ್ತು ಸ್ಥಳೀಯರು ಸೂಕ್ತ ಜಾಗೆಯನ್ನು ಒದಗಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಾರ್ವಜನಿಕರ ಸಲಹೆಗಳು: ಕಿತ್ತೂರು ಚೆನ್ನಮ್ಮನವರ ಸಾಹಸಗಾಥೆಯನ್ನು ಪರಿಚಯಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ, ಬಿಚ್ಚುಗತ್ತಿ ಭರಮಣ್ಣ ಸೇರಿದಂತೆ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬೆಳಕು ಚೆಲ್ಲಬೇಕು.ಕೋಟೆಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಮಾಹಿತಿ‌ ನೀಡಲು ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸಬೇಕು, ಚೆನ್ನಮ್ಮನ ಜನ್ಮಸ್ಥಳದ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು, ಪಟ್ಟಣ ಸ್ವಚ್ಛತೆ, ವಿದ್ಯುತ್ ದೀಪಾಲಂಕಾರ ಮಾಡಬೇಕು, ಕೋಟೆ ಗೋಡೆ ರಕ್ಷಣೆ ಮಾಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಸಲಹೆಗಳನ್ನು ನೀಡಿದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು, ಕಳೆದ ವರ್ಷ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿತ್ತು. ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular