Wednesday, April 23, 2025
Google search engine

Homeರಾಜ್ಯಸುದ್ದಿಜಾಲವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಜತೆ ವಿಜ್ಞಾನದ ಅರಿವಿದ್ದರೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ: ಎನ್.ಎಸ್.ದೀಪ

ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಜತೆ ವಿಜ್ಞಾನದ ಅರಿವಿದ್ದರೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ: ಎನ್.ಎಸ್.ದೀಪ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ .ಆರ್.ನಗರ: ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಜತೆಗೆ ವಿಜ್ಞಾನದ ಅರಿವು ಇದ್ದರೆ ಉತ್ತಮ ಮತ್ತು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದು ಪಟ್ಟಣದ ಶ್ರೀ ಯಡತೊರೆ ಶಿಕ್ಷಣ ಮಹಾ ವಿದ್ಯಾಲಯದ ಬಿಇಡಿ ಕಾಲೇಜು ಪ್ರಾಂಶುಪಾಲೆ ಎನ್.ಎಸ್.ದೀಪ ಹೇಳಿದರು.

ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ವಿಜ್ಞಾನದ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನದ ವಿಚಾರಗಳನ್ನು ಹೆಚ್ಚಾಗಿ ತಿಳಿದುಕೊಂಡು ವೈಜ್ಞಾನಿಕತೆ ಬೆಳೆಸಿಕೊಂಡರೆ ಉತ್ತಮ ಜ್ಞಾನ ಪಡೆಯಬಹುದು ಎಂದರು.

ವಿದ್ಯಾರ್ಥಿಗಳು ಕಲಿಕೆಯ ಬಗ್ಗೆ ಹೆಚ್ಚು ಆಸಕ್ತಿ ವಹಿಸುವುದ ಜತೆಗೆ ಪರಿಸರ ಸಂರಕ್ಷಣೆಯ ಬಗ್ಗೆ ಒಲವು ತೋರಿಸಿ ಆ ವಿಚಾರವನ್ನು ಇತರರಿಗೂ ತಿಳಿಸುವುದರ ಮೂಲಕ ಸಾರ್ವಜನಿಕ ಪ್ರಜ್ಞೆ ಮೂಡಿಸಿ ಉತ್ತಮ ಸಮಾಜ ಮತ್ತು ಹಸಿರು ಪರಿಸರ ನಿರ್ಮಾಣಕ್ಕೆ ಕಟಿಬದ್ದರಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಪರಿಸರ ಉತ್ತಮವಾಗಿದ್ದರೆ ಆರೋಗ್ಯವು ಸ್ಥಿರವಾಗಿರಲಿದ್ದು ನಮ್ಮೊಂದಿಗೆ ಸಾರ್ವಜನಿಕರು ಕೈ ಜೋಡಿಸಿ ತಮ್ಮ ಮನೆಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಇಡಿ ಕಾಲೇಜು ಸುತ್ತಮ ಮತ್ತು ೧೬ನೇ ವಾರ್ಡಿನ ವಿದ್ಯಾನಗರದ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿಗಳು, ಕಾಲೇಜು ಬೋಧಕ ಸಿಬ್ಬಂದಿ ಸಸಿಗಳನ್ನು ನೆಟ್ಟು ನೀರೆರೆದರು. ವಿಜ್ಞಾನ ಉಪನ್ಯಾಸಕರಾದ ಕೆ.ಮಹದೇವ್, ಟಿ.ಪಿ.ವಸಂತ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು.

ಕಾಲೇಜಿನ ಸಾರ್ವಜನಿಕ ಸಂರ್ಪಕಾಧಿಕಾರಿ ಲೋಕೇಶ್‌ಭರಣಿ, ಉಪನ್ಯಾಸಕರಾದ ಜಯರತ್ನ, ಮಹೇಶ್ವರಿಸ್ವಾಮಿ, ಮೋಹನ್‌ಕುಮಾರಿ, ಬೀನಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular