Friday, April 11, 2025
Google search engine

Homeಅಪರಾಧಕೊಡಗು:ವಿದ್ಯುತ್ ತಂತಿ ತುಂಡಾಗಿ ಬಿದ್ದು 6 ಜಾನುವಾರುಗಳು ಬಲಿ

ಕೊಡಗು:ವಿದ್ಯುತ್ ತಂತಿ ತುಂಡಾಗಿ ಬಿದ್ದು 6 ಜಾನುವಾರುಗಳು ಬಲಿ

ಮಡಿಕೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರುಗಳು ಬಲಿಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನೆನ್ನೆ ನಡೆದಿದೆ.

ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಳಿಕ ಅಧಿಕಾರಿಗಳು ವಿದ್ಯುತ್ ತಂತಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯುತ್ ಸರಬರಾಜು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular