ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜ. ೨೫ ಮತ್ತು ೨೬ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜ. ೨೫ ರಂದು ಬೆಳಗ್ಗೆ ೧೦ ಗಂಟೆಗೆ ವಿರಾಜಪೇಟೆಯ ಅಂಬಟ್ಟಿ ಗ್ರಾಮದ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ ೨.೩೦ ಗಂಟೆಗೆ ಮುಖ್ಯಮಂತ್ರಿಯವರೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಜನವರಿ, ೨೬ ರಂದು ಬೆಳಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.