ಕೊಡಗು: ಕರ್ತವ್ಯಕ್ಕೆ ತೆರಳಿದ್ದಾಗ ಜಾನುವಾರು ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಡಿಕೇರಿ ತಾಲೂಕು ಪಶುವೈದ್ಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೆ.ಆರ್. ದಯಾನಂದ (59) ನಿಧನರಾದ ಅಧಿಕಾರಿ.
ಕೆ.ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಶಾಲೆಯಲ್ಲಿ ಕರ್ತವ್ಯಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ.
ಮಡಿಕೇರಿ ಸಮೀಪದ ಮೇಕೇರಿಯ ನಿವಾಸಿಯಾಗಿದ್ದಾರೆ.