Saturday, April 19, 2025
Google search engine

Homeರಾಜಕೀಯಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬೆಂಗಳೂರು: ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಇಂದು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ.

ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಇತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೆಂದರೆ ಅರುಣ್ ಸಿಂಗ್, ಕೈಲಾಶ್ ವಿಜಯ್ ವರ್ಗೀಯ, ದುಷ್ಯಂತ ಕುಮಾರ್ ಗೌತಮ್, ತರುಣ್ ಚುಗ್, ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ರಾಧಾಮೋಹನ್ ಅಗರ್ವಾಲ್. ಬಿಜೆಪಿ ನಡೆ ಬಾರಿ ಕುತೂಹಲ ಮೂಡಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ನಡುವೆ ಮಾಜಿ ಸಚಿವ ಸಿ.ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ.
ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular