Friday, April 18, 2025
Google search engine

Homeರಾಜಕೀಯನಾವಿಬ್ಬರೂ ಒಂದಾಗದೇ ಕೋಲಾರ ಗೆಲ್ಲಲಾಗದು!: ಕೆ.ಹೆಚ್.ಮುನಿಯಪ್ಪ ನಕಾರ

ನಾವಿಬ್ಬರೂ ಒಂದಾಗದೇ ಕೋಲಾರ ಗೆಲ್ಲಲಾಗದು!: ಕೆ.ಹೆಚ್.ಮುನಿಯಪ್ಪ ನಕಾರ

ಬೆಂಗಳೂರು: ನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಬಂದರು. ಪಕ್ಷ ಗೆಲ್ಲಬೇಕು ಎಂಬ ಕಾರಣಕ್ಕೆ ನಾನು ಯಾರನ್ನೂ ವಿರೋಧಿಸಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಯಾರ ವಿರುದ್ಧವೂ ಕೆಲಸ ಮಾಡಿಲ್ಲ. ರಮೇಶ್ ಕುಮಾರ್ ಮತ್ತು ನನ್ನ ಮಧ್ಯೆ ಸಮಸ್ಯೆ ಪರಿಹರಿಸುವಂತೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾನೇ ಮನವಿ ಮಾಡಿದ್ದೆ ಎಂದರು. ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ನಾನು ಕೂಡ ಒಬ್ಬ ಅಭ್ಯರ್ಥಿಯ ಹೆಸರು ಹೇಳಿದ್ದೇನೆ. ಮೂರನೇ ಅಭ್ಯರ್ಥಿಯ ಹೆಸರನ್ನು ನಾನು ಹೇಳಿಲ್ಲ. ರಮೇಶ್ ಕುಮಾರ್ ಮತ್ತು ನನ್ನನ್ನು ಮೊದಲು ಒಗ್ಗೂಡಿಸಿ, ನಂತರ ಚುನಾವಣೆ ಮಾಡಿ ಎಂದಿದ್ದೇನೆ” ಎಂದು ತಿಳಿಸಿದರು. ಇತ್ತೀಚಿನ ಬೆಳವಣಿಗೆಗಳಿಂದ ನನಗೆ ನೋವಾಗಿದೆ. ಆದರೆ, ಪಕ್ಷ ನನಗೆ ಮುಖ್ಯ. ಇಲ್ಲಿ ನಾವಿಬ್ಬರೂ ಒಂದಾಗದಿದದ್ದರೆ ಮೂರನೇ ವ್ಯಕ್ತಿ ಅಭ್ಯರ್ಥಿಯಾಗಿ ಬಂದರೂ ಗೆಲುವು ಕಷ್ಟ ಎಂದು ಹೇಳಿದರು.

ನಮ್ಮ ಕುಟುಂಬದ ಚಿಕ್ಕಪೆದ್ದಣ್ಣ ಅವರಿಗೇ ಟಿಕೆಟ್ ಕೊಡುವಂತೆ ನಾನು ಕೇಳಿದ್ದೇನೆ. ಗೌತಮ್ ಹೆಸರನ್ನು ನಾನು ಹೇಳಿಲ್ಲ. ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಮುನಿಯಪ್ಪ ಎಚ್ಚರಿಕೆ ನೀಡಿದರು.
ರಮೇಶ್ ಕುಮಾರ್ ಅವರ ಜತೆ ಚರ್ಚಿಸಲು ಪ್ರಯತ್ನಿಸಿದೆ. ನಾನೇ ಅವರ ಮನೆ ಬಳಿ ಹೋಗಿದ್ದೆ. ಆದರೆ, ಅವರು ಮನೆಯಲ್ಲಿರಲಿಲ್ಲ. ಕಾಂಗ್ರೆಸ್ ಕಚೇರಿಯಲ್ಲಿ ಅವರ ಜತೆ ಮಾತನಾಡಿದೆ. ಎಲ್ಲವನ್ನೂ ಬಿಟ್ಟುಬಿಡೋಣ ಎಂದು ಅವರೇ ಹೇಳಿದ್ದರು. ಮುಖ್ಯಮಂತ್ರಿಯವರು ರಮೇಶ್ ಕುಮಾರ್ ಅವರನ್ನು ಕೂರಿಸಿಕೊಂಡು ಮಾತನಾಡಿದರೆ ಎಲ್ಲವೂ ಸರಿಯಾಗುತ್ತದೆ ಎಂದರು.

ನಾನು ಮತ್ತೊಮ್ಮೆ ಮನವಿ ಮಾಡುತ್ತೇನೆ. ನಾನು ಹೇಳಿದ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಖಂಡಿತವಾಗಿಯೂ ಗೆಲ್ಲಿಸಿಕೊಂಡು ಬರುತ್ತೇನೆ. ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಬಳಿಯೂ ಹೇಳಿದ್ದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮನವರಿಕೆ ಮಾಡಿದ್ದೆ. ಈಗಲೂ ಕಾಲ ಮಿಂಚಿಲ್ಲ. ರಮೇಶ್ ಕುಮಾರ್ ಮತ್ತು ನನ್ನನ್ನು ಒಂದು ಮಾಡಿದರೆ ಕೋಲಾರ, ಚಿಕ್ಕಬಳ್ಳಾಪುರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.

RELATED ARTICLES
- Advertisment -
Google search engine

Most Popular