ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲು ಪಕ್ಷ ನಿರ್ಧಾರ ಮಾಡಿರುವ ಬೆನ್ನಲ್ಲೇ ಅದನ್ನು ಖಂಡಿಸಿ ಕೋಲಾರ ಭಾಗದ ಶಾಸಕರು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದರು.
ಬೆಂಗಳೂರಿನ ವಿಧಾನ ಸೌಧದಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಕೊಠಡಿಗೆ ಆಗಮಿಸಿದ ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ನಜೀರ್ ಅಹ್ಮದ್ ಮತ್ತು ಅನಿಲ್ ಹೊರಟ್ಟಿ ಕುಳಿತು ಕ್ಯಾಮರಾಗಳಿಗೆ ರಾಜೀನಾಮೆ ಪತ್ರವನ್ನು ಪ್ರದರ್ಶಿಸಿದರು. ಆದರೆ, ರಾಜಿನಾಮೆ ಕೊಡದೆ ಹೊರಹೋಗಿದ್ದರು. ಈ ಬಗ್ಗೆ ಮಾತನಾಡಿರುವ ಬಸವರಾಜ ಹೊರಟ್ಟಿ ಎಂಎಲ್‌ಸಿಗಳು ಮತ್ತು ಶಾಸಕರು ಸಮಯ ಕೇಳಿದ್ದರು. ಕಾಗದದಲ್ಲಿ ಬರೆದುಕೊಂಡು ನನ್ನ ಕೊಠಡಿಗೆ ಬಂದರು. ನಾನು ಲೆಟರ್ ಹೆಡ್‌ಲ್ಲಿ ಅಧಿಕೃತವಾಗಿ ಬರೆದುಕೊಡಿ ಎಂದು ಕೇಳಿದೆ. ಅವರು ಕೊಡಲಿಲ್ಲ, ಹಾಗಾಗಿ ನಾನು ರಾಜೀನಾಮೆ ಸ್ವೀಕರಿಸಲಿಲ್ಲ ಎಂದು ಸಭಾಪತಿ ಹೊರಟ್ಟಿ ಸ್ಪಷ್ಟಪಡಿಸಿದರು.