Tuesday, July 1, 2025
Google search engine

Homeಅಪರಾಧಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು(ದಕ್ಷಿಣ ಕನ್ನಡ): ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಮೇಲೆ ಹಲ್ಲೆ ಸಂಬಂಧಿತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶಿವಪ್ರಸಾದ್ (33) ಅನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತುಂಬೆ ಗ್ರಾಮದ ನಿವಾಸಿಯಾಗಿರುವ ಆರೋಪಿಯನ್ನು ಬಂಟ್ವಾಳ ರಾಯಿಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಹ್ಮಾನ್ ಅವರನ್ನು ಮೇ 27ರಂದು ಹತ್ಯೆ ಮಾಡಲಾಗಿತ್ತು.







RELATED ARTICLES
- Advertisment -
Google search engine

Most Popular