ಗುಂಡ್ಲುಪೇಟೆ: ತಾಲೂಕಿನ ಕೂತನೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮಹದೇವಮ್ಮ, ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾದರು.
ಕೂತನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹದೇವಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಮ್ಮ ಇಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಚುನಾವಣೆ ಅಧಿಕಾರಿಯಾಗಿದ್ದ ಚಾಮರಾಜನಗರ ರೇಷ್ಮೆ ಇಲಾಖೆ ಅಧಿಕಾರಿ ರೇಣುಕೇಶ್ ಘೋಷಣೆ ಮಾಡಿದರು. ನಂತರ ಬೆಂಬಲಿಗರು ನೂತ ಅಧ್ಯಕ್ಷೆ ಹಾಗು ಉಪಾಧ್ಯಕ್ಷೆಗೆ ಹೂವಿನ ಹಾರ ಹಾಕಿ ಅಭಿನಂದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ನೂತನ ಅಧ್ಯಕ್ಷೆ ಮಹದೇವಮ್ಮ ಮಾತನಾಡಿ, ಕೂತನೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಬೀದಿದೀಪ, ಕುಡಿಯುವ ನೀರು ಸೇರಿದಂತೆ ಇನ್ನಿತರ ಹಲವು ಮೂಲಭೂತ ಸೌಲಭ್ಯಗಳನ್ನು ಜನರಿಗೆ ಒದಗಿಸುವ ನಿಟ್ಟಿನಲ್ಲಿ ಗ್ರಾಪಂ ಸದಸ್ಯರು ಹಾಗು ಗ್ರಾಮಸ್ಥರ ಸಹಕಾರ ಪಡೆದು ಕೆಲಸ ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜೇಗೌಡ, ಗೋಪಾಲ್, ಸಿದ್ದರಾಜು, ಮಾದಶೆಟ್ಟಿ, ರತ್ನಮ್ಮ, ಪಿಡಿಓ ಭೋಜೇಶ್, ಮುಖಂಡರಾದ ಬೆಳ್ಳಶೆಟ್ಟಿ, ತವರಗಟ್ಟಶೆಟ್ಟಿ, ಪ್ರಕಾಶ್, ಬಸವಶೆಟ್ಟಿ ಸೇರಿದಂತೆ ಇನ್ನಿತರರು ಹಾಜರಿದ್ದರು